ಬೆಳಗಾವಿ : ಡೆತ್ ನೋಟ್ ಅಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ. ಡೆತ್ನೋಟ್ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.