ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ರಸ್ತೆಯ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಯುವಕ ಸಾಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಾಂಡೆಭಾಗದಲ್ಲಿ ನಡೆದಿದೆ.
ಮೃತ ಯುವಕನನ್ನು ಮಹಾಂತೇಶ್ ಬಾನಾವಳಿಕರ್ (28) ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅವರ್ಸಾದ ದಾಂಡೆಭಾಗ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅಂಗಡಿಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಒಂದು ದುರಂತ ನಡೆದಿದೆ.ಘಟನೆ ಕುರಿತಂತೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.