ಮೈಸೂರು : ಮೈಸೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ಹತ್ಯೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.
ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕಾರ್ತಿಕ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹತ್ಯೆ ಸಂಬಂಧ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.