ರಾಯಚೂರು : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಯಚೂರಿನ ಜಾಕಿರ್ ಹುಸೇನ್ ಸರ್ಕಲ್ ಬಳಿ ಯುವಕನನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸಾದಿಕ್ (27) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಸಾದಿಕ್ ನನ್ನು ಕರೀಮ್ ಎಂಬಾತ್ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.