ಬೆಳಗಾವಿ : ಬೆಳಗಾವಿಯಲ್ಲಿ ನರ್ಸಿಂಗ್ ಓದುತ್ತಿದ್ದ ಯುವತಿಯ ಕಿಡ್ನಾಪ್ ಆಗಿದ್ದು, ಮುಸ್ಲಿಂ ಯುವಕ ಯುವತಿಯನ್ನು ಅಪಹರಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸದ್ರುದ್ದೀನ್ ಭೇಪಾರಿ ಮತ್ತು ನರ್ಸಿಂಗ್ ಓದುತ್ತಿದ್ದ ಯುವತಿ ನಡುವೆ ಸ್ನೇಹ ಬೆಳೆದಿತ್ತು. ನಂತರ ಈ ಸ್ನೇಹ ಪ್ರೀತಿಗೆ ತಿರುಗಿ ಎರಡರಿಂದ ಮೂರು ವರ್ಷಗಳೇ ಕಳೆದಿತ್ತು. ಆದರೆ ಮನೆಯಲ್ಲಿ ಮದುವೆ ಸುದ್ದಿ ಹೇಳಿದ್ದೇ ತಡ ಹುಡುಗಿ ತಾಯಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಆಕ್ರೋಶಗೊಂಡ ಯುವತಿ ಕುಟುಂಬಸ್ಥರು ಯುವಕನ ಮನೆ ವಿರುದ್ಧ ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಾರೆ ಕೆಲಸ ಮಾಡ್ತಿದ್ದ ಸದ್ರುದಿನ್ ಬೇಪಾರಿ ಎಂಬಾತನ ವಿರುದ್ಧ ಯುವತಿ ಕುಟುಂಬದವರು ಅಪಹರಣದ ಆರೋಪ ಹೊರಿಸಲಾಗಿದ್ದು, 17 ದಿನಗಳ ಹಿಂದೆ ಹಿಂದೂ ಹುಡುಗಿಯನ್ನ ಸದ್ರುದಿನ್ ಎಂಬಾತ ಅಪಹರಿಸಿ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.







