ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ಬೆಳಕಿಗೆ ಬಂದಿದ್ದು, 24 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆಯಲ್ಲಿ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೋನಿಯಾ (24) ಎಂದು ಗುರುತಿಸಲಾಗಿದೆ.
ಮನೆಯ ಆರ್ಥಿಕ ಒತ್ತಡದಿಂದ ಮನನೊಂದು ಈಕೆ ಸೂಸೈಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.