ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿದೇಶದಲ್ಲಿ ಓದು ಮುಗಿಸಿ ಇತ್ತೀಚೆಗಷ್ಟೇ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ದೇವಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂದು ಮುಂಜಾನೆ ಫಾರ್ಮ್ಹೌಸ್ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.