ಚಿಕ್ಕಬಳ್ಳಾಪುರ : ನನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಯುವಕನೊಬ್ಬ ಮದುವೆಗೆ ನಿರಾಕರಿಸಿದ ಯುವತಿಗೆ ಟಾಯ್ಲೆಟ್ ಕ್ಲೀನರ್ ಎರಚಿ, ತಾನು ಕೂಡ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಭಗ್ನ ಪ್ರೇಮಿ ಒಬ್ಬ ಇದೀಗ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಮಂಚನಬೆಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಮಂಚನಬೆಲೆಯಲ್ಲಿ ಯುವತಿಗೆ ಟಾಯ್ಲೆಟ್ ಕ್ಲೀನರ್ ಎರಚಿ ಆನಂದ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆನಂದ್ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಆನಂದ್ ಸಾವನಪ್ಪಿದ್ದಾನೆ .
ನನಗೆ ಸಿಗದ ಅವಳು ಯಾರಿಗೂ ಸಿಗಬಾರದು ಎಂದು ಟಾಯ್ಲೆಟ್ ಕ್ಲೀನರ್ ಎರಚಿದ್ದಾನೆ. ಅತ್ತೆ ಮಗಳನ್ನು ಆನಂದ್ ಕುಮಾರ್ ಪ್ರೀತಿ ಮಾಡುತ್ತಿದ್ದ.ವೈಶಾಲಿಯನ್ನು ಮದುವೆ ಮಾಡಿಕೊಡಿ ಎಂದು ಆನಂದ ವೈಶಾಲಿ ಪೋಷಕರ ಬಳಿ ಕೇಳಿದ್ದ. ಮದುವೆ ಮಾಡಿಕೊಡಲು ವೈಶಾಲಿ ಪೋಷಕರು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡು ಆಸಿಡ್ ಎರಚಿ ಬಳಿಕ ಆನಂದ ಆತ್ಮಹತ್ಯೆ ಯತ್ನಿಸಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.