ಕೊಡಗು : ಕೊಡಗು ಜಿಲ್ಲೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತನ್ನ ಸ್ನೇಹಿತನ ಜೊತೆಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸವಿಗೀಡಾಗಿರುವ ಘಟನೆ ನಡೆದಿದೆ. ಹೊಸತೋಟ ಬಳಿಯ ಗರಗಂದೂರಿನಲ್ಲಿ ದುರ್ಘಟನೆ ಸಂಭವಿಸಿದೆ.
ಮೃತ ಯುವಕನನ್ನು ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(25) ಎಂದು ತಿಳಿದುಬಂದಿದೆ. ಮೃತ ಯೋಗೇಶ್ ಮತ್ತು ಆತನ ಸ್ನೇಹಿತ ಪ್ರದೀಪ್ ಎಂಬುವರು ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಮೀನು ಹಿಡಿಯಲು ಹೋದಾಗ ಈ ದುರಂತ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.