ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಅಮಾನತುಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ.
ಹೌದು ಕಳೆದ ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪ ಅಬ್ದುಲ್ ಜಬ್ಬಾರ್ ಅವರ ಮೇಲೆ ಬಂದಿತ್ತು. ಅಬ್ದುಲ್ ಜಬ್ಬಾರ್ ವಿರುದ್ಧ ಮತ್ತಷ್ಟು ದಾಖಲೆ ಲಭ್ಯವಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬರ ವಿರುದ್ಧ ಈ ಒಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ಸಿನ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದಲೆ ಜಬ್ಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.








