ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಬ್ದುಲ್ ರಹೀಂ ಹತ್ಯೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ತಡೆಯುವಲ್ಲಿ ರಾಜ್ಯ ಕಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಗಳ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲ ಕಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ರಫ್, ಇಂದು ಮಧ್ಯಹ್ನ ಮಂಗಳೂರಿನಲ್ಲಿ ನಮ್ಮ ಮುಖಂಡರ ಸಭೆ ನಡೆಯಲಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಗೃಹ ಇಲಾಖೆ ಸಂಪೂರ್ಣ ವಿಫಲಾವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ನಾವು ಭಾಗಿಯಾಗಲ್ಲ ಎಂದಿದ್ದಾರೆ.