ದಕ್ಷಿಣಕನ್ನಡ : ಸುಹಾಸ್ ಶೆಟ್ಟಿ ಭೀಕರ ಕೊಲೆ ಘಟನೆ ಮಾಸುವ ಮುನವೇ ದಕ್ಷಿಣ ಕನ್ನಡದಲ್ಲಿ ಮತ್ತೆ ರಕ್ತ ಹರಿದಿದ್ದು, ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 15 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇದೀಗ ಎಫ್ಐಆರ್ ದಾಖಲಾಗಿದೆ. ಅಬ್ದುಲ್ ರೆಹಮಾನ್ ಪರಿಚಯಸ್ಥರೇ ಆಗಿರುವ 15 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ನಿಸಾರ್ ಎಂಬುವವರು ದೂರು ನೀಡಿದ್ದರು. ಇದೀಗ ಅವರ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. BNS ಕಾಯ್ದೆ 103,109, 118(1), 118 (2), 190 191(1), 191(2), 191(3) ರಡಿ ಪ್ರಕರಣ ದಾಖಲಾಗಿದೆ.