ಹಾಸನ : ಹಾಸನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 2 ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ಡಿಕ್ಕಿಯಾಗಿ 25 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಸಕೇಶಪುರ ತಾಲೂಕಿನ ಮಾರನಹಳ್ಳಿ ಬಳಿ 2 ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 25 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಳೂರಿನಿಂದ ಮಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಗಳ ನಡುವೆ ಡಿಕ್ಕಿಯಾಗಿದ್ದು, ಗಾಯಗೊಂಡ ಪ್ರಯಾಣಿಕರನ್ನು ಸಕಲೇಶಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿ ರಭಸಕ್ಕೆ ಒಂದು ಸಾರಿಗೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಕಲೇಶಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.