ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ ಸಂಭವಿಸಿದ್ದು, ಕಾರು ರಿವರ್ಸ್ ತೆಗಿಯುವಾಗ ಚಾಲಕ ಮಗುವಿನ ಮೇಲೆ ಕಾರು ಹರಿಸಿದ್ದಾನೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕಾರಿನ ಚಕ್ರಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದಾನೆ.
ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಒಂದು ವರ್ಷದ ಮಗು ನೂತನ ಎಂದು ತಿಳಿದುಬಂದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಗುಡ್ಡದ ಅಳಿಯ ಬೆನಕ ಲೇಔಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಾರು ಹರಿದು ಮೋಹನ್ ಎಂಬುವವರ ಮಗ ನೂತನ ಸಾವನಪ್ಪಿದ್ದಾನೆ. ನಿನ್ನೆ ಬೆಳಿಗ್ಗೆ ಮೋಹನ್ ಮನೆಗೆ ಅಕ್ಕ ದೇವಿಕಾ ಮತ್ತು ಭಾವ ಬಂದಿದ್ದರು.
ಈ ವೇಳೆ ರಸ್ತೆಯ ಪಕ್ಕದಲ್ಲಿ ಆಟ ಆಡುತ್ತಿದ್ದ ಮಗುವನ್ನು ಚಾಲಕ ಗಮನಿಸಿಲ್ಲ. ಆಗ ನೂತನ ಮೇಲೆ ಕಾರು ಹರಿದು ಸ್ಥಳದಲ್ಲೇ ನೂತನ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 106ರ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯಕ್ಕೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.








