ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಸತತ ಎರಡನೇ ದಿನವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ.
ನಿನ್ನೆ ಸಮೀರ್ ನನ್ನು ಐದು ಗಂಟೆಗಳ ಕಾಲ ವಿಚಾರಣೆಯನ್ನು ಪೊಲೀಸರು ನಡೆಸಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಿದ್ದಾನೆ. ನಿನ್ನೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ವಿಚಾರಣೆ ನಡೆಸಲಾಯಿತು. ಬೆಳ್ತಂಗಡಿ ಪಿಎಸ್ಐ ಸುಬ್ಬಾಪುರ್ ಮಠ್ ಅವರಿಂದ ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.