ಬೆಂಗಳೂರು : ಇದೇ ಜನವರಿ 26ರಂದು ಗಣರಾಜ್ಯೋತ್ಸವದಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದಂತೆ ಬೆಂಗಳೂರಿನ ವಿವಿಧಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಹೌದು ಬಂಧಿತ ಆರೋಪಿಯನ್ನು ಶಿವಾಜಿನಗರದ ಮನ್ಸೂರ್ (40) ಎಂದು ತಿಳಿದುಬಂದಿದೆ. ಜನೆವರಿ 9ರಂದು ರಿಯಾಜ್ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದ. ಬಳಿಕ ಈತ 6 ವ್ಯಕ್ತಿಗಳ ಹೆಸರು ಮತ್ತು ಅವರ ಮೊಬೈಲ್ ಸಂಖ್ಯೆಗಳ ಮಾಹಿತಿ ನೀಡಿ, ಈ ವ್ಯಕ್ತಿಗಳು ಗಣರಾಜ್ಯೋತ್ಸವದ ದಿನ ನಗರದಲ್ಲಿ ವಿವಿಧೆಡೆ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ರೀತಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದ.
ವಿಷಯ ತಿಳಿದು ಕಂಟ್ರೋಲ್ ರೂಂ ಪಿಎಸ್ಐ ಬೆಂಗಳೂರಿನ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಮೊಬೈಲ್ ಸಂಖ್ಯೆಯ ಸುಳಿವು ಆಧರಿಸಿ ವಿಧಾನಸೌಧ ಠಾಣೆ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಇದೊಂದು ಹೊಸ ಕರೆ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ವಿಚಾರಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ.