ಮಂಡ್ಯ : ಮಂಡ್ಯದಲ್ಲಿ ಮನೆಯ ಟರೇಸ್ ಮೇಲೆಯೇ ಗಾಂಜಾ ಬೆಳೆದ ವ್ಯಕ್ತಿಯೊಬ್ಬನನ್ನು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಬಂಧಿಸಿದ್ದಾರೆ.
ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ 3 ಕೆಜಿ 664 ಗ್ರಾಂನಷ್ಟು ಗಾಂಜಾ ಸೊಪ್ಪನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ಕಲಂ 20(ಎ)(i) ಎನ್ಡಿಪಿಸಿ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ