ಆಂಧ್ರಪ್ರದೇಶ : ಆಂಧ್ರ ಪ್ರದೇಶ ಸರ್ಕಾರದ ಸ್ಟಾರ್ ಶಾಸಕ ಆಗಿರುವ ಬಾಲಯ್ಯ ಅವರು ಟಾಲಿವುಡ್ನ ಸೂಪರ್ ಸ್ಟಾರ್ಗಳಲ್ಲಿ ಸಹ ಒಬ್ಬರಾಗಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವರೊಬ್ಬರು ಬಾಲಯ್ಯ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಪಯ್ಯವುಲ ಕೇಶವ ಅವರು, ‘ಬಾಲಕೃಷ್ಣ ಅವರಿಗೆ ಆರೋಗ್ಯ ಹದಗೆಟ್ಟಿದೆ ಹಾಗಾಗಿ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ’ ಎಂದಿದ್ದಾರೆ. ಆದರೆ ಬಾಲಯ್ಯ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.ಬಾಲಯ್ಯ ಅವರಿಗೆ ಅನಾರೋಗ್ಯ ಉಂಟಾಗಿರುವುದು ಸಹಜವಾಗಿಯೇ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.