ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಡೆವಿಲ್ ಸಿನಿಮಾ ಶೂಟಿಂಗಾಗಿ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ನೀಡುವಂತೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ ಜೂನ್ 25 ರವರೆಗೆ ವಿದೇಶಕ್ಕೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಸಿಆರ್ಪಿಸಿ ಸೆಕ್ಷನ್ 439(1) (b) ರಡಿ ದರ್ಶನವರು ಅರ್ಜಿ ಸಲ್ಲಿಸಿದ್ದಾರೆ. ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಬಳಿಕ ಹೊರ ರಾಜ್ಯಗಳಿಗೆ ಹೋಗಲು ಹೈಕೋರ್ಟ್ ಅನುಮತಿ ನೀಡಿತ್ತು. ಸಿನಿಮಾ ಚಿತ್ರೀಕರಣ ಕಾರಣ ನೀಡಿ ದರ್ಶನ್ ಷರತ್ತು ಸಡಿಲಿಸಿಕೊಂಡಿದ್ದರು.
ಇದೀಗ ಡೆವಿಲ್ ಸಿನೆಮಾ ಚಿತ್ರೀಕರಣದ ಕಾರಣ ನೀಡಿ ವಿದೇಶಕ್ಕೆ ತೆರಳಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಜೈಮಾತಾ ಪ್ರೊಡಕ್ಷನ್ ಮನವಿ ಆಧರಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.