ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಸದ್ಯ ಮೈಸೂರಿನಿಂದ ಕಾಮಾಕ್ಷಿಪಾಳ್ಯಕ್ಕೆ ನಟ ದರ್ಶನ್‌ ಅವರನ್ನು ಕರೆತರಲಾಗುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್‌ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ದರ್ಶನ್‌ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿ ಪಾಳ್ಯಕ್ಕೆ ಕರೆಸಿಕೊಂಡು ನಟ ದರ್ಶನ್‌ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್‌ ೮ ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್‌ ೯ ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ.

ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್‌ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.

Share.
Exit mobile version