ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹುಟ್ಟು ಹಬ್ಬದ ದಿನದಂದೆ ಪವಿತ್ರ ಗೌಡಗೆ ಬಿಗ್ ಶಾಕ್ ಎದುರಾಗಿದೆ. ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ ಇದೀಗ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಹೌದು ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ಪವಿತ್ರ ಗೌಡಗೆ ಮಧ್ಯಂತರ ಜಾಮೀನು ನೀಡಲು ಇದೀಗ ಕೋರ್ಟ್ ನಿರಾಕರಿಸಿದೆ.








