ಬೆಂಗಳೂರು : ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬೆನ್ನು ನೋವಿನ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
ತೀವ್ರ ಬೆನ್ನು ನೋವಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ವೈದ್ಯರು ನಟ ದರ್ಶನ್ ಗೆ ಸರ್ಜರಿ ಮಾಡಲು ನಿರ್ಧರಿಸಿದ್ದು, ಇದಕ್ಕೆ ನಟ ದರ್ಶನ್ ಸಹ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಗೆ ಸರ್ಜರಿ ಮಾಡುವ ಕುರಿತು ಪತ್ನಿ ವಿಜಯಲಕ್ಷ್ಮೀ ಜೊತೆಗೆ ಚರ್ಚೆ ನಡೆಸಲಾಗಿದ್ದು, ಇದಕ್ಕೆ ಅವರು ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಶೀಘ್ರವೆ ವೈದ್ಯರು ನಟ ದರ್ಶನ್ ಬೆನ್ನು ನೋವಿಗೆ ಸರ್ಜರಿ ಮಾಡಲು ಸಿದ್ಧತೆ ನಡೆಸಿದ್ದಾರೆ.