ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ವೇಳೆ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇಂದು ನಟ ದರ್ಶನ್ ಗೆ ಬೇಲ್ ಸಿಗುತ್ತಾ ಅಥವಾ ಇಲ್ವಾ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ ಇಂದು ಸುಪ್ರೀಂ ಕೋರ್ಟ್ ಪ್ರಕರಣದ ಕುರಿತು ಮಹತ್ವದ ತೀರ್ಪು ಪ್ರಕಟಿಸಲಿದೆ.
ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು. ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು, ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ತೀರ್ಪು ಪ್ರಕಟಿಸಲಿದೆ.
ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯ ಇಂದು ನಿರ್ಧಾರ ಆಗಲಿದೆ. ಆರೋಪಿಗಳ ಜಾಮೀನು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ ಇಂದಿನ ಕೇಸ್ ಪಟ್ಟಿಯಲ್ಲಿ ದರ್ಶನ್ ಕೇಸ್ ಲಿಸ್ಟ್ ನಲ್ಲಿದೆ ಹೆಚ್ಚುವರಿ ಲಿಸ್ಟ್ ನಲ್ಲಿ ಮೂರನೇ ಪ್ರಕರಣವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. 7 ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತು. ಜಾಮೀನು ಮುಂದುವರಿಸಿದಂತೆ ಪೊಲೀಸರು ಮನವಿ ಮಾಡಿದ್ದರು. ವಿಚಾರಣೆಯ ವೇಳೆ ಸುಪ್ರೀಂಕೋರ್ಟ್ ಹೈ ಕೋರ್ಟ್ ಆದೇಶದ ಬಗ್ಗೆ ಪ್ರಶ್ನಿಸಿದ್ದರು. ಹಾಗಾಗಿ ಇಂದು ದರ್ಶನ್ ಮತ್ತು ಇತರೆ ಆರೋಪಿಗಳು ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ಮುಂದುವರಿಸಬೇಕೆ ಅಥವಾ ಬೇಡವೇ ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ಕಳೆದ ವಿಚಾರಣೆಯ ವೇಳೆ ವಾದ ಪ್ರತಿ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು, ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದ್ದರು. ಇದೀಗ ಇಂದು ಸುಪ್ರೀಂ ಕೋರ್ಟ್ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ನಟ ದರ್ಶನ್ ಜಾಮೀನು ರದ್ದು ಮಾಡುತ್ತಾ ಅಥವಾ ಜಾಮೀನು ಮುಂದುವರಿಸುತ್ತಾ ಎನ್ನುವುದರ ಕುರಿತು ಮಹತ್ವದ ತೀರ್ಪು ಪ್ರಕಟಿಸಲಿದೆ. ಹಾಗಾಗಿ ದರ್ಶನ್ ಅಭಿಮಾನಿಗಳು ಸೇರಿದಂತೆ ಇಡೀ ರಾಜ್ಯದ ಜನತೆಯ ಚಿತ್ತ ಸುಪ್ರೀಂ ಕೋರ್ಟ್ ನತ್ತ ಇದೆ.