ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಟ ದರ್ಶನ್ ಹಾಗು 7 ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ ಮನವಿಯ ಅರ್ಜಿಯ ವಿಚಾರಣೆ ನಡೆಯಲಿದೆ ಹಾಗಾಗಿ ನಟ ದರ್ಶನ್ ಗೆ ಇಂದು ಬಿಗ್ ಡೇ ಅಂತಾನೆ ಹೇಳಬಹುದು.
ಹೌದು ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದು ಕೋರಿದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ನಟ ದರ್ಶನ್ ಪರವಾಗಿ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಲಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಕೇಸಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದೆ. ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವ ಸಾಧ್ಯತೆ ಇದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ. 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿತ್ತು.