ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ಹೈಕೋರ್ಟ್ ಈ ಒಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.
ಹೌದು ಜಾಮೀನು ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠದಲ್ಲಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.
ನಟ ದರ್ಶನ್ ಗೆ ತೀವ್ರ ಬೆನ್ನು ನೋವು : ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಕೂಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ವೇಳೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.