ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವಂತಹ ನಟ ದರ್ಶನ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ನಟ ದರ್ಶನ್ ಅವರ ಬೆನ್ನು ನೋವಿನ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗಿದೆ.
ಬೆನ್ನು ನೋವಿನ ಸಮಸ್ಯೆಗೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ವಿಷಯ ಬಹಿರಂಗವಾಗಿದ್ದು ನಟ ದರ್ಶನ್ ಅವರ ಬೆನ್ನು ಮೂಳೆಯ L5 ಹಾಗೂ S1 ನಲ್ಲಿ ವಿಪರೀತ ನೋವು ಕಾಣಿಸಿಕೊಂಡಿದ್ದು, ಅಲ್ಲದೆ ಬೆನ್ನಿನಲ್ಲಿ ಊತ ಸಹ ಕಂಡುಬಂದಿದೆ. ಅಲ್ಲದೆ ಇತ್ತೀಚಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿಸಲಾಗಿತ್ತು. ಇದೆ ರೀತಿ ಮುಂದುವರೆದರೆ ನಟ ದರ್ಶನ್ ಅವರಿಗೆ ಪ್ಯಾರಲಿಸಿಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇಂದು ನಟ ದರ್ಶನ್ ಅವರ ಆರೋಗ್ಯದ ಕುರಿತು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು, ನ್ಯೂರೋ ಸರ್ಜನ್ ಮೂರು ಅಂಶ ಹೇಳಿದ್ದಾರೆ. ನಂಬ್ನೆಸ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿಗೆ ಸಮಸ್ಯೆ ಆಗಬಹುದು. ಡಿಸ್ಕ್ ಸಮಸ್ಯೆ ಇದೆ. ತಕ್ಷಣ ಸರ್ಜರಿಗೆ ಸೂಚಿಸಿದ್ದಾರೆ. ಇಲ್ಲವಾದರೆ ಪ್ಯಾರಾಲಿಸಿಸ್ ಆಗಬಹುದು ಎಂದು ತಿಳಿಸಿದ್ದಾರೆ.
ಎಂಆರ್ಐ, ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಬೆಂಗಳೂರಿನ ಆಸ್ಪತ್ರೆ ಅಥವಾ ಬಳ್ಳಾರಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮತ್ತು ಆಪರೇಷನ್ಗೆ ಸೂಚಿಸಲಾಗಿದೆ. ಹಾಗಾಗಿ ಅನಾರೋಗ್ಯ ಕಾಡುತ್ತಿರುವುದರಿಂದ ಅವರಿಗೆ ತುರ್ತಾಗಿ ಚಿಕಿತ್ಸೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಿವಿ ನಾಗೇಶ್ ಮನವಿ ಮಾಡಿದ್ದಾರೆ.
ಇಂದುಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ಕಾಲಾವಕಾಶ ಕೋರಿದ್ದಾರೆ. ಹಾಗಾಗಿ ನಾಳೆಗೆ ವಿಚಾರಣೆ ಮುಂದೂಡಿಕೆ ಆಗಿದೆ. ಅಕ್ಟೋಬರ್ 22ರಂದು ದರ್ಶನ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂಆರ್ಐ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಸದ್ಯಕ್ಕೆ ದರ್ಶನ್ ಅವರು ನಡೆಯಲು ಕೂಡ ಕಷ್ಟಪಡುತ್ತಿದ್ದಾರೆ