ಬೆಂಗಳೂರು: ಇಂದು ಸಂಜೆಯೊಳಗೆ ರೇಣುಕಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರು ಇಲ್ಲವೇ ಮೈಸೂರಿನಲ್ಲಿರುವ ಪೊಲೀಸರ ಮುಂದೆ ಶರಣಾಗಲಿದ್ದಾರ ಎನ್ನಲಾಗಿದೆ.
ತನ್ನ ಜಾಮೀನು ರದ್ದಾದ ಬೆನ್ನಲೇ ನಟ ದರ್ಶನ್ ಆತಂಕಕ್ಕೆ ಒಳಗಾಗಿದ್ದು, ಮುಂದಿನ ಕಾನೂನು ಕ್ರಮದ ಬಗ್ಗೆ ಚರ್ಚೆ ನಡೆಸಿದ ಬಳಿಕ ವಕೀಲರೊಂದಿಗೆ ಪೊಲೀಸರ ಮುಂದೆ ಶರಣಾಗಲಿದ್ದಾರೆ ಎನ್ನಲಾಗಿದೆ. ಸದ್ಯ ನಟ ದರ್ಶನ್ ಚಾಮರಾಜನಗರ ಜಿಲ್ಲೆಯ ತಮಿಳು ನಾಡಿಗೆ ಹೋಗಿದ್ದಾರೆ ಎನ್ನಲಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ನಡುವೆ ವಕೀಲರ ಮೂಲಕ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿಸಿರುವ ದರ್ಶನ್ ಇಂದು ಸಂಜೆಯೊಳಗೆ ಶರಣಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆಯೊಳಗೆ ನಟ ದರ್ಶನ್ ಶರಣಾದರೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಮುಂದಿನ ಕಾನೂನು ಕ್ರಮಗಳನ್ನು ಅಧಿಕಾರಿಗಳು ಮಾಡಲಿದ್ದಾರೆ. ಇದಲ್ಲದೇ ಅವರನ್ನು ಯಾವ ಜೈಲಿಗೆ ಇಡಬೇಕು ಎನ್ನುವುದು ಕೂಡ ಇಂದೇ ನಿರ್ಧಾರವಾಗುವು ಸಾಧ್ಯತೆ ಇದೇ.
ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ನಟರಾದ ದರ್ಶನ್, ಪವಿತ್ರಾ ಗೌಡ ಮತ್ತು ನಾಗರಾಜು ಆರ್., ಅನು ಕುಮಾರ್ @ ಅನು, ಲಕ್ಷ್ಮಣ್ ಎಂ, ಜಗದೀಶ್ @ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ @ ಪ್ರದೂಷ್ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು (ಆಗಸ್ಟ್ 13) ರದ್ದುಗೊಳಿಸಿದೆ. ಡಿಸೆಂಬರ್ 2024 ರಲ್ಲಿ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿ, ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು ಎಲ್ಲಾ ಏಳು ಆರೋಪಿಗಳಿಗೆ ನೀಡಿದ್ದ ಜಾಮೀನು ರದ್ದು ಮಾಡಿದೆ.
ಜೂನ್ 2024 ರಲ್ಲಿ ಚಿತ್ರದುರ್ಗದಿಂದ ಮೃತ ವ್ಯಕ್ತಿಯನ್ನು ಅಪಹರಿಸಿ ಬೆಂಗಳೂರಿನ ಶೆಡ್‌ನಲ್ಲಿ ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿದ್ದರು ಎಂದು ದರ್ಶನ್ ವಿರುದ್ದ ಆರೋಪ ಕೇಳಿ ಬಂದಿದೆ. ದೌರ್ಜನ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದು, ಪೊಲೀಸರ ವರದಿಯ ಪ್ರಕಾರ ಮೃತದೇಹವನ್ನು ಚರಂಡಿಗೆ ಎಸೆಯಲಾಗಿದೆ. ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ನಂತರ ಆರೋಪಿಗಳಾದ ದರ್ಶನ್, ಪವಿತ್ರ, ಅನು ಕುಮಾರ್, ಲಕ್ಷ್ಮಣ್ ಎಂ, ವಿ ವಿನಯ್, ಜಗದೀಶ್, ಪ್ರದೂಷ್ ಎಸ್ ರಾವ್ ಮತ್ತು ನಾಗರಾಜು ಆರ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.