ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಆರೋಪಿ ನಟ ದರ್ಶನ್ ಅವರನ್ನು ಇರಿಸಲು ಬಳ್ಳಾರಿ ಕೇಂದ್ರ ಕಾರಾಗೃಹದ 15 ನೇ ನಂಬರ್ ಸೆಲ್ ನಿಗದಿಪಡಿಸಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿ ಜೈಲು ತಲುಪಲಿದ್ದಾರೆ ಎನ್ನಲಾಗಿದೆ.
ಇನ್ನು ನಟ ದರ್ಶನ್ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿನ 15 ನೇ ನಂಬರ್ ಸೆಲ್ ನಿಗದಿಪಡಿಸಲಾಗಿದ್ದು, ದಿನದ 24 ಗಂಟೆಯೂ ಅವರ ಚಲನವಲನಗಳ ಮೇಲೆ ನಿಗಾವಹಿಸಲು ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ.