ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ತಡರಾತ್ರಿ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.