ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಸುಧೀರ್ಘವಾಗಿ ವಾದ ಮಂಡಿಸಿದ್ದಾರೆ. ಇಂದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಸಮ್ಮುಖದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ.
ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರಗೌಡ, ಮತ್ತು ಇನ್ನುಳಿದ ಆರೋಪಿಗಳ ಪರ ವಕೀಲರು ಕೂಡ ವಾದ ಮಂಡಿಸಿದ್ದಾರೆ.ಇನ್ನು ಸರ್ಕಾರದ ಪರವಾಗಿ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಲಿದ್ದು, ಇಂದು ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ದರ್ಶನ್ ಪವಿತ್ರ ಗೌಡ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ.ಇನ್ನುಳಿದಂತೆ ನಾಗರಾಜು, ಲಕ್ಷ್ಮಣ್ ಪರ ವಾದ ಮಂಡಿಸಿದ್ದರೆ.
ಇವರೆಲ್ಲರ ವಾದಕ್ಕೆ ಎಸ್ ಪಿ ಪಿ ಪ್ರಸನ್ ಕುಮಾರ್ ಪ್ರತಿವಾದ ಮಾಡಲಿದ್ದಾರೆ. ಅರ್ಹತೆ ಆಧಾರದಲ್ಲಿ ಬೇಲ್ ನೀಡದಂತೆ ಅವರು ಮನವಿ ಸಲ್ಲಿಸಲಿದ್ದಾರೆ. ಜಾಮೀನು ಕೊಟ್ಟರೆ ಆಗುವ ಸಮಸ್ಯೆಗಳ ಬಗ್ಗೆಯೂ ಕೂಡ ಪ್ರಸನ್ನಕುಮಾರ್ ವಾದ ಮಂಡಿಸಲಿದ್ದಾರೆ. ಇನ್ನು ದರ್ಶನ್ ಪರ ವಕೀಲರಾದಂತಹ ಸಿಬಿ ನಾಗೇಶ್ ಅವರು ಮಧ್ಯಂತರ ಜಾಮೀನು ಅರ್ಜಿಯನ್ನು ವಿಸ್ತರಿಸಲು ಮತ್ತೊಂದು ಅರ್ಜಿಯನ್ನು ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.