ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟಿಗೆ ನಟ ದರ್ಶನ್ ಗೆ ನೀಡಬೇಕಾದಂತಹ ಚಿಕಿತ್ಸೆ ವರದಿ ಸಲ್ಲಿಕೆಯಾಗಿದೆ. ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟಿಗೆ ನಟ ದರ್ಶನ್ ಚಿಕಿತ್ಸೆ ಸಂಪೂರ್ಣ ವರದಿ ಇಂದು ಸಲ್ಲಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದರು. ಅವರಿಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಇದೇ ಕಾರಣದಿಂದ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ನೀಡಿತ್ತು. ಇದೀಗ ಜೈಲಿನಿಂದ ಬಿಡುಗಡೆಯಾದ ಬಳಿಕ ಒಂದು ವಾರದ ಒಳಗೆ ವೈದ್ಯಕೀಯ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.ಇದೀಗ ಇಂದು ನಟ ದರ್ಶನ್ ಅವರ ವೈದ್ಯಕೀಯ ವರದಿ ಸಲ್ಲಿಕೆಯಾಗಿದೆ.
ಬೆಂಗಳೂರು ನಗರದ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಕಳೆದ ಆರು ದಿನಗಳ ಹಿಂದೆ ದಾಖಲಾಗಿದ್ದಾರೆ. ಈ ವೇಳೆ ನಟ ದರ್ಶನ್ ಅವರಿಗೆ ಎಂ ಆರ್ ಐ ಸ್ಕ್ಯಾನ್, ಸಿಟಿ ಸ್ಕ್ಯಾನ್ ಹಾಗೂ ಬ್ಲಡ್ ಟೆಸ್ಟ್ ಸೇರಿದಂತೆ ಹಲವು ಪರೀಕ್ಷೆಗಳನ್ನು ವೈದ್ಯರು ನಡೆಸಿದ್ದಾರೆ. ಎಲ್ಲಾ ಪರೀಕ್ಷೆಗಳ ವರದಿಗಳನ್ನು ಇಂದು ಹೈಕೋರ್ಟ್ ನಲ್ಲಿ ಮುಟ್ಟಿದ ಲಕೋಟೆಯಲ್ಲಿ ನಟ ದರ್ಶನ್ ಪರ ವಕೀಲರು ಸಲ್ಲಿಸಿದರು.








