ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ಪ್ರಕರಣ ನೀಡಲಾಗಿದೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಉಸ್ತುವಾರಿಯಲ್ಲಿ ಡಿಸಿಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದರು.
ನಾವು ಈ ಒಂದು ದೂರನ್ನು ಸಿಸಿಬಿಗೆ ಕೊಟ್ಟಿದ್ದೇವೆ ಅವರು ಕ್ರಮ ಕೈಗೊಳ್ಳುತ್ತಾರೆ. ನಮ್ಮ ಸಿಸಿಬಿ ಸೈಬರ್ ಠಾಣೆಗೆ ನಟಿ ರಮ್ಯಾ ದೂರು ಕೊಟ್ಟಿದ್ದೇವೆ. ಅಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ದೂರಿನ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾರೆ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದರ ಬಗ್ಗೆ ಸಿಸಿಬಿ ಜಾಯಿಂಟ್ ಕಮಿಷನರ್ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ಇಂದು ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಟಿ ರಮ್ಯಾ ಅವರು ನಟ ದರ್ಶನ್ ಫ್ಯಾನ್ಸ್ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದರ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ನಟಿ ರಮ್ಯಾ ದೂರಿನನ್ವಯ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.