ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಈಗಾಗಲೇ ರೆಗ್ಯುಲರ್ ಬೇಲ್ ಸಿಕ್ಕಿದ್ದು, ಸದ್ಯ ಅವರು ತಮ್ಮ ಪತ್ನಿ, ಮಗ ಹಾಗೂ ಕುಟುಂಬದ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದಾರೆ.ಅಲ್ಲದೆ ಸಂಕ್ರಾಂತಿ ಹಬ್ಬದ ವೇಳೆ ನಟ ದರ್ಶನ್ ಅವರು ಆಪರೇಷನ್ ಗೆ ಒಳಗಾಗುವ ಸಾಧ್ಯತೆಯಿದ್ದು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳುವ ಕುರಿತು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ನಟ ದರ್ಶನ್ ಗೆ ಆಪರೇಷನ್ ಮಾಡುವ ವೈದ್ಯರಾದಂತಹ ಅಜಯ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಆಪರೇಷನ್ ಗೆ ನಟ ದರ್ಶನ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬದ ವೇಳೆ ದರ್ಶನ್ ಆಪರೇಷನ್ ಫಿಕ್ಸ್ ಆಗಿದೆ. ಆಪರೇಷನ್ ಬಳಿಕ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಒಂದುವರೆ ತಿಂಗಳುವರೆಗೂ ಫೈಟ್ ದೃಶ್ಯದಲ್ಲಿ ಭಾಗಿ ಆಗುವಂತೆ ಇಲ್ಲ ಆದರೆ ಕೇವಲ ಚಿತ್ರಿಕರಣದಲ್ಲಿ ಮಾತ್ರ ಭಾಗಿಯಾಗಬಹುದು.
ಬಳಿಕ ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ನಟ ದರ್ಶನ್ ಅವರು ಭಾಗಿಯಾಗಲಿದ್ದಾರೆ. ಚಿತ್ರೀಕರಣಕ್ಕೂ ಮುನ್ನ ಅವರು ಆಪರೇಷನ್ ಮಾಡಿಸಿಕೊಳ್ಳಲು ನಿರ್ಧಾರ ಕೈಗೊಂಡಿದ್ದಾರೆ. ಆಪರೇಷನ್ ಮಾಡಿಸಿಕೊಂಡು ಮೂರು ದಿನ ವಿಶ್ರಾಂತಿಯಲ್ಲಿ ಇರಬೇಕು ಎಂದು ದರ್ಶನ್ಗೆ ಚಿಕಿತ್ಸೆ ನೀಡುತ್ತಿರುವ ಅಂತಹ ವೈದ್ಯ ಅಜಯ್ ಮಾಹಿತಿ ನೀಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿದ್ದಾಗ ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಡಿತ್ತು.ಈ ವೇಳೆ ಅವರು ಬೆನ್ನುನೋವಿನ ಸಮಸ್ಯೆ ಸಮಸ್ಯೆ ಹೈಕೋರ್ಟಿಗೆ ತಿಳಿಸಿ, ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಬಳಿಕ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗದೆ, ರೆಗ್ಯುಲರ್ ಬೇಲ್ ಪಡೆದುಕೊಂಡು ಬಿಡುಗಡೆಯಾಗಿದ್ದರು. ಇದೀಗ ಸಂಕ್ರಾಂತಿ ಹಬ್ಬದ ವೇಳೆ ಅವರು ಶಸ್ತ್ರಚಿಕಿಚಿಗೆ ಒಳಗಾಗಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ.