ಬೆಂಗಳೂರು : ನಟಿ ರಮ್ಯಾಗೆ ಸಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣದ ಬೆನ್ನೆಲ್ಲೆ, ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೂಡ ಅಶ್ಲೀಲ ಕಮೆಂಟ್ ಹಾಗೂ ನಿಂದಿಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, 6 ಆರೋಪಿಗಳ ವಿರುದ್ಧ 45ನೇ ಎಸಿಎಂಎಂ ಕೋರ್ಟ್‌ಗೆ 473 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.
ವಿಜಯಲಕ್ಷ್ಮೀ ಅವರು 2025ರ ಡಿಸೆಂಬರ್‌ನಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಮೆಂಟ್ ಹಾಕಿದ್ದ ಕಿಡಿಗೇಡಿಗಳ ವಿರುದ್ಧ ಸೈಬರ್‌ಕ್ರೆ,,0 ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಸಿಸಿಬಿ ಖಾಸೀಂ ರಾಜಾ ಅವರ ನೇತೃತ್ವದ ತಂಡ 6 ಮಂದಿ ಆರೋಪಿಗಳನ್ನು ಬಂಧಿಸಿತ್ತು.
ಇದೀಗ ತನಿಖೆ ಪೂರ್ಣಗೊಂಡಿದ್ದು ಎಲ್ಲಾ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳ ಪೈಕಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂದು ಹೇಳಿಕೊಂಡಿದ್ದಾರೆ. ಆದರೆ, ವಿಚಾರಣೆಯಲ್ಲಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಗೂ ನಿಂದಿಸಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರುವುದಾಗಿ ಆರೋಪಿಗಳು ವಿಚಾರಣೆಯ ವೇಳೆ ತಪ್ರೊಪ್ಪಿಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ
-
ದೂರು: ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಗೆ ಅವಾಚ್ಯ ಶಬ್ದಗಳಿಂದ ಕೂಡಿದ, ಅಶ್ಲೀಲ ಸಂದೇಶಗಳು ಮತ್ತು ಬೆದರಿಕೆಗಳು ಬರುತ್ತಿವೆ ಎಂದು ಬೆಂಗಳೂರಿನ ಸಿಆರ್ ಪೇಟೆ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
-
ಆರೋಪಿ: ಈ ಕೃತ್ಯದ ಹಿಂದೆ ದರ್ಶನ್ ಅವರ ಕಟ್ಟಾ ಅಭಿಮಾನಿ ಎನ್ನಲಾದ ವ್ಯಕ್ತಿಯೊಬ್ಬನ ಕೈವಾಡವಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಪೊಲೀಸರು ಸಿದ್ಧಪಡಿಸಿರುವ ಈ ಬೃಹತ್ ದೋಷಾರೋಪ ಪಟ್ಟಿಯಲ್ಲಿ ಹಲವು ತಾಂತ್ರಿಕ ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ:
-
ಡಿಜಿಟಲ್ ಸಾಕ್ಷ್ಯ: ಆರೋಪಿ ಬಳಸಿದ ಮೊಬೈಲ್ ಫೋನ್, ಸಿಮ್ ಕಾರ್ಡ್ ಮತ್ತು ಇಂಟರ್ನೆಟ್ ಐಪಿ (IP) ವಿಳಾಸದ ಮಾಹಿತಿ.
-
ಸಂದೇಶಗಳ ವಿವರ: ವಿಜಯಲಕ್ಷ್ಮಿ ಅವರಿಗೆ ಕಳುಹಿಸಲಾದ ಅಶ್ಲೀಲ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಮತ್ತು ಅವುಗಳ ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಗಳು.
-
ಸಾಕ್ಷಿಗಳ ಹೇಳಿಕೆ: ದೂರುದಾರರ ಹೇಳಿಕೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವ್ಯಕ್ತಿಗಳ ಸಾಕ್ಷ್ಯಗಳನ್ನು ದಾಖಲಿಸಲಾಗಿದೆ.








