ಬೆಂಗಳೂರು : ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮೇ. 26 ರಂದು ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ನಗರ ಪೊಲೀಸರು ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ನನ್ನು ಬಂಧಸಿಇದ್ದಾರೆ.
ಧ್ರುವ ಸರ್ಜಾ ಕಾಲು ಚಾಲಕನಾಗಿದ್ದ ನಾಗೇಂದ್ರ ಎಂಬಾತನ ಸೂಚನೆಯಂತೆ ಮೇ. 26 ರಂದು ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಹಾಗೂ ಸುಹಾಶ್ ಹಲ್ಲೆ ಮಾಡಿದ್ದರು. ಕೆ.ಆರ್.ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದಿದ್ದ ಈ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿತ್ತು.








