ಬೆಂಗಳೂರು : ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ (86) ಬೆಂಗಳೂರಿನಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ಬೆಂಗಳೂರಿನಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಮೂಲತಃ ಕನ್ನಡಿಗರಾದ ಪ್ರಕಾಶ್ ರಾಜ್ ಅವರು ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡಿದ್ದಾರೆ. ತಾಯಿಯ ಅಗಲಿಕೆಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ.








