ಬೆಂಗಳೂರು: ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ನಟ ಪ್ರಥಮ್ ದೂರು ಆಧರಿಸಿ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. BNS u\s 351(2)(3), 352, 126(2) r\w3(5) ರಡಿ ಪ್ರಕರಣ ದಾಖಲಾಗಿದೆ. A1 ಬೇಕರಿ ರಘು, A2 ಯಶಸ್ವಿನಿ ಮತ್ತು ಇತರರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಳೆದ ಜುಲೈ 22 ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್ ಗೆ ಡ್ರಾಗರ್ ನಿಂದ ಹಲ್ಲೆಗೆ ಯತ್ನಿಸಿದ್ದು ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು. ಇದೀಗ ದೊಡ್ಡಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.