ಬೆಂಗಳೂರು: ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬೇಕರಿ ರಘು ಹಾಗೂ ಯಶಸ್ವಿನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನಟ ಪ್ರಥಮ್ ಗೆ ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ರೌಡಿಶೀಟರ್ ಗಳಾದ ಬೇಕರಿ ರಘು ಹಾಗೂ ಯಶಸಿನಿ ಇಂದು ದೊಡ್ದಬಳ್ಳಾಪುರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.
ಆರೋಪಿಗಳು ಬಳಿಕ ದೊಡ್ಡಬಳ್ಳಾಪುರ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ದೊಡ್ಡಬಳ್ಳಾಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಅರ್ಜಿ ವಿಚಾರಣೆ ನಡೆಸಿದ್ದು, ಬಳಿಕ ಜಾಮೀನು ಮಂಜೂರು ಮಾಡಿದೆ.