ಬೆಂಗಳೂರು : ದೊಡ್ಮನೆ ರಾಜಕುಮಾರ್ ಕುಟುಂಬದ ನಟ ಯುವರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಆರು ತಿಂಗಳಿನಿಂದ ಪತ್ನಿ ಶ್ರೀದೇವಿಯಿಂದ ದೂರವಿರುವ ನಟ ಯುವರಾಜ್ ಕುಮಾರ್ ಅವರು ವಿಚ್ಚೇದನಕ್ಕೆ ಫ್ಯಾಮೀಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್‌ಕುಮಾರ್ ಅಲಿಯಾಸ್ ಯುವ ರಾಜ್‌ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.
ಯುವ ರಾಜ್‌ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು.