ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಟಿ, ರಾಜಕಾರಣಿ ರಮ್ಯಾ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.