ಬೆಂಗಳೂರು : ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿ ನಟಿ ರಮ್ಯಾ ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದರು. ಈ ಕುರಿತು ನಟಿ ರಮ್ಯಾ ಬೆಂಗಳೂರು ಕಮಿಷನರ್ ಗೆ ದೂರು ನೀಡಿದ್ದರು. ಬಳಿಕ ಕಮಿಷನರ್ ಈ ಒಂದು ಪ್ರಕರಣ ಸಿಸಿಬಿಗೆ ವರ್ಗಾಯಿಸಿದರು. ಈ ವೇಳೆ ಸಿಸಿಬಿ ಪೊಲೀಸರು ಇತ್ತೀಚಿಗೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮತ್ತೆ ಇಬ್ಬರ ಆರೋಪಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಹಾಕಿ, ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಮತ್ತೆ ಇಬ್ಬರನ್ನು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜಾಲತಾಣದಲ್ಲಿ ಪೋಸ್ಟ್ ಹಾಕಿ ನಿಂದಿಸಿದ ಇಬ್ಬರು ಆರೋಪಿಗಳನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗೆ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬಳ್ಳಾರಿ ಮೂಲದ ಒಬ್ಬ ಹಾಗೂ ಚಿತ್ರದುರ್ಗ ಮೂಲದ ಮತ್ತೊಬ್ಬನನ್ನು ಅರೆಸ್ಟ್ ಮಾಡಿದ್ದರು.