ಬೆಂಗಳೂರು : ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ನಟಿ ರಮ್ಯಾ ಬೆಂಗಳೂರು ಕಮಿಷನರ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ 43 ದರ್ಶನ್ ಫ್ಯಾನ್ಸ್ ಪೇಜುಗಳ ಮೇಲೆ ಎಫ್ಐಆರ್ ಕೂಡ ದಾಖಲಾಗಿದ್ದು ಈ ವಿಚಾರವಾಗಿ ಬೆಂಗಳೂರು ಕಮಿಷನರ್ ಸೀಮಂತ್ ಸಿಂಗ್ ಮಾತನಾಡಿ, ನಾವು ಈ ಒಂದು ದೂರನ್ನು ಸಿಸಿಬಿಗೆ ಕೊಟ್ಟಿದ್ದೇವೆ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಿಸಿಬಿ ಸೈಬರ್ ಠಾಣೆಗೆ ನಟಿ ರಮ್ಯಾ ದೂರು ಕೊಟ್ಟಿದ್ದೇವೆ. ಅಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ದೂರಿನ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾರೆ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದರ ಬಗ್ಗೆ ಸಿಸಿಬಿ ಜಾಯಿಂಟ್ ಕಮಿಷನರ್ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.