ನವದೆಹಲಿ : ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಗೆ ಇದೀಗ ಬಿಗ್ ರೆಲೀಫ್ ಸಿಕ್ಕಿದೆ , ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಗೊಳಿಸಿದೆ.
2011ರಲ್ಲಿ ಅಕ್ರಮ ಗಣಿಗಾರಿಕೆ ಸಂಬಂಧಪಟ್ಟ ಎಡಿಜಿಪಿ ಚಂದ್ರಶೇಖರ್ ಅವರಿಗೆ ಹೆಚ್‍ಡಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದ ಎಡಿಜಿಪಿ ಚಂದ್ರಶೇಖರ್ ಗೆ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಕುರಿತು ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್ ಜೀವ ಬೆದರಿಕೆ ಪ್ರಕರಣ ದಾಖಲಿಸಿದ್ದರು. ಈ ವೇಳೆ ಹೈ ಕೋರ್ಟ್ ಎಚ್ ಡಿ ಕುಮಾರಸ್ವಾಮಿ ಮೇಲಿನ ಎಫ್ ಐ ಆರ್ ರದ್ದುಗೊಳಿಸಿ ಆದೇಶ ನೀಡಿತು.
ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಇದೀಗ ಸುಪ್ರೀಂಕೋರ್ಟ್ ವಜಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಕೂಡ ಎಫ್ಐಆರ್ ಮೇಲಿನ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು ಇಂದಿನ ವಿಚಾರಣೆಯಲ್ಲೂ ಕೂಡ ಹೈ ಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇಂತಹ ಪ್ರಕರಣವನ್ನು ರಾಜಕೀಯ ವೇದಿಕೆಯಾಗಿ ಮಾಡಿಕೊಳ್ಳಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.