ಬೆಂಗಳೂರು : ಹಿರಿಯ IPS ಅಧಿಕಾರಿ ಚಂದ್ರಶೇಖರ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ ಎಚ್ ಡಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜನೆವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೋರಡಿಸಿತು.
ಹೌದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್, ಜನವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು, ರದ್ದು ಪಡಿಸುವಂತಿಲ್ಲ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ಇದೀಗ ನಿರ್ಬಂಧ ವಿಸ್ತರಣೆ ಮಾಡಿದೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ ಎಸ್ ಪಿ ಪಿ ಹೇಳಿಕೆಯನ್ನು ಹೈಕೋರ್ಟ್ ಇದೆ ವೇಳೆ ದಾಖಲಿಸಿಕೊಂಡಿತು.
ಈ ಹಿಂದಿನ ಗಣಿ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ, ರಾಜ್ಯದಲ್ಲಿ SIT ರಚನೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಜಾಮೀನಿನ ಮೇಲಿರುವ ಕುಮಾರಸ್ವಾಮಿ ತನಿಖೆ ನಡೆಸುತ್ತಿರುವ ತಮಗೆ ಕುಮಾರಸ್ವಾಮಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.ಆ ಮೂಲಕ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್‍ಡಿ ಕುಮಾರಸ್ವಾಮಿ, ನಿಖಿಲ್ ಮತ್ತು ಸುರೇಶ್ ಬಾಬು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.