ಹಾವೇರಿ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾ ರವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವನಪ್ಪಿರುವ ಘಟನೆ ನಡೆದಿತ್ತು. ಇದೀಗ ಹಾವೇರಿ ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.