ಶಿವಮೊಗ್ಗ: ಕಳೆದ ಕೆಲವು ದಿನಗಳ ಹಿಂದೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿಯೇ SDA ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಇದೀಗ ಶಿವಮೊಗ್ಗದಲ್ಲಿ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು ಮೆಸ್ಕಾಂ ವಸತಿ ಗೃಹದಲ್ಲಿ, ಸಿಬ್ಬಂದಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು ಮೆಸ್ಕಾಂ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಡೆದಿದೆ. ನಂದೀಶ್ (38) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಸದ್ಯಕ್ಕೆ ಪೋಲೀಸರ ಮಾಹಿತಿಯ ಪ್ರಕಾರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಇನ್ನೂ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತಂತೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.