ಮೈಸೂರು : ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕವನ್ನುಂಟು ಮಾಡಿದೆ. ಚಾಮರಾಜನಗರ ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಇಂದು ಮುಂಜಾನೆ 2.40!ಕ್ಕೆ ಇ-ಮೇಲ್ ಸಂದೇಶ ಬಂದಿದೆ. ಇದರ ಬೆನ್ನಲ್ಲೇ ಮೈಸೂರಿನ ವಿವಿಧ ಭಾಗಗಳಲ್ಲಿ ಬಾಂಬ್ ಬಿಟ್ಟಿರುವದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ.
ಹೌದು ಇಂದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದರ ಬೆನ್ನಲ್ಲೆ ಮೈಸೂರಿನ ವಿವಿಧ ಭಾಗಗಳಲ್ಲಿ ಬಾಂಬ್ ಇಟ್ಟಿರುವುದಾಗಿದೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.ಪೊಲೀಸ್ ಆಯುಕ್ತರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಈ ಕುರಿತು ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.