ಬೆಂಗಳೂರು : ಇತ್ತೀಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಡಿನ್ನರ್ ಪಾಲಿಟಿಕ್ಸ್ ಹೆಚ್ಚಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನ ಸಚಿವರಿಗೆ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಯೋಜನೆ ಮಾಡಿದ್ದರು. ಅದಾದ ಬಳಿಕ ಅಧಿಕ ಮಾರ್ಚ್ 16 ರಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಸಚಿವರಿಗೆ ಹಾಗೂ ಶಾಸಕರುಗಳಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ.
ಹೌದು ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.
ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ನೆಪದಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಅದರ ಬೆನ್ನಲ್ಲೇ ಮಾರ್ಚ್ 12ರಂದು ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿತ್ತು.








