ಬೆಳಗಾವಿ : ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಇತ್ತೀಚಿಗೆ ಹನುಮಧ್ವಜ ತೆರವು ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು ಇದಕ್ಕೆ ರಾಜ್ಯ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬಜರಂಗದಳ ಕೂಡ ವಿರೋಧ ವ್ಯಕ್ತಪಡಿಸಿ ಪಾದಯಾತ್ರೆ ಹಾಗೂ ಪ್ರತಿಭಟನೆ ಕೂಡ ನಡೆಸಿತ್ತು. ಇದೀಗ ಮತ್ತದೇ ಪ್ರಕರಣ ಬೆಳಕಿಗೆ ಬಂದಿದ್ದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಎಂಬ ಗ್ರಾಮದಲ್ಲಿ ಪೊಲೀಸರು ಭಗವಾದ್ವಜವನ್ನು ತೆರವುಗೊಳಿಸಿದ್ದಕ್ಕೆ ತೀವ್ರವಾದ ಆಕ್ರೋಶ ವ್ಯಕ್ತವಾಗುತ್ತಿದೆ.
ಮಂಡ್ಯ ತಾಲೂಕಿನ ಕೆರೆಗೋಡು ಬಳಿಕ ಈಗ ಬೆಳಗಾವಿಯಲ್ಲಿ ಧ್ವಜ ದಂಗಲ್ ಸದ್ದು ಮಾಡುತ್ತಿದೆ. ಜಿಲ್ಲೆಯ ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿಯಲ್ಲಿ ಭಗವಾದ್ವಜ ತೆರವು ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಭಗವಾಧ್ವಜ ಅಭಿಯಾನ ಹಮ್ಮಿಕೊಳಲ್ಲಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರಿಂದ ಭಗವಧ್ವಜ ತೆರವು ಖಂಡಿಸಿ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಬಿಜೆಪಿ ನಾಯಕರು ಎಂ ಕೆ ಹುಬ್ಬಳ್ಳಿ ಚಲೋ ಉಪಾಧ್ಯಾಯರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.