ಬೆಂಗಳೂರು : ಈಗಾಗಲೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಮೊದಲ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆಯ ವೇಲ್ ಎಳದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಆಯೋಗಕ್ಕೆ ಮಂಡ್ಯದ ಜಿಲ್ಲಾ ಬಿಜೆಪಿ ವಕ್ತಾರ ಸಿಟಿ ಮಂಜುನಾಥ್ ಅವರು ದೂರು ನೀಡಿದ್ದಾರೆ.
ಹೌದು 6 ವರ್ಷಗಳ ಹಿಂದಿನ ಘಟನೆ ಸಂಭಂದ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲಾಗಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ದೂರು ಸಲ್ಲಿಸಲಾಗಿದೆ. ಮಂಡ್ಯದ ಜಿಲ್ಲಾ ಬಿಜೆಪಿ ವಕ್ತಾರ ಸಿಟಿ ಮಂಜುನಾಥ್ ಅವರಿಂದ ದೂರು ದಾಖಲಾಗಿದೆ. ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆಂದು ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಹಿಂದೆ ಸಿಎಂ ಸಿದ್ದರಾಮಯ್ಯ ಮಹಿಳೆಯ ವೇಲ್ ಎಳೆದು ಅಪಮಾನಿಸಿದ್ದಾರೆ.ಆ ಮಹಿಳೆ ದೂರು ದಾಖಲಿಸಿದ್ದಾರೋ ಇಲ್ಲವೋ ಗೊತ್ತಿಲ್ಲ ಅಲ್ಲದೆ ದೂರು ಸಲ್ಲಿಸಿದಂತೆ ಮಹಿಳೆಗೆ ಬೆದರಿಕೆ ಹಾಕಿರಬಹುದು. ಸೀರೆ ಎಳೆದು ಅವಮಾನಿಸಿರುವ ವಿಡಿಯೋ ಸಹ ವೈರಲ್ ಆಗಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಬೇಕು. ತನಿಖೆ ಮಾಡಿ ಮಹಿಳೆಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಲಾಗಿದೆ.
ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಈ ಒಂದು ಉಘಟನೆ ನಡೆದಿತ್ತು ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆಯ ವೇಲ್ ಎಳದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಹಿಳಾ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯದ ಜಿಲ್ಲಾ ಬಿಜೆಪಿ ವಕ್ತಾರ ಸಿಟಿ ಮಂಜುನಾಥ್ ಆನ್ಲೈನ್ ಮುಖಾಂತರ ದೂರು ದಾಖಲಿಸಿದ್ದಾರೆ.